ರಸ್ತೆ ಬದಿಯಲ್ಲಿ ಮಲಗಿದವರ ಮೇಲೆರಗಿದ ರೋಡ್ ರೋಲರ್: ಇಬ್ಬರು ಸ್ಥಳದಲ್ಲೇ ಸಾವು
ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ದಾರುಣ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಸಮೀಪ ರಾಷ್ಟ್ರೀಯ ಹೆದ್ದಾರಿ 48ರ ಬ್ರಿಡ್ಜ್ ಬಳಿ ನಡೆದಿದೆ. ಸಿದ್ದು(24ವ) ಹಾಗೂ ಪ್ರೀತಮ್(25ವ) ಮೃತ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ.
ಇವರಿಬ್ಬರು ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದ್ದು ಈ ವೇಳೆ ರೋಲರ್ ಹರಿದು ಸಾವನ್ನಪ್ಪಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.