ನಾವು ಯಾರ ಮೇಲೂ ದ್ವೇಷದ ರಾಜಕಾರಣ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ
ನಾವು ಯಾರ ಮೇಲೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಪರಾಧ ಮಾಡಿ ಎಂದು ನಾವು ಯಾರಿಗೂ ಹೇಳಿಲ್ಲ. ಮುನಿರತ್ನ ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದೆ. ನಮ್ಮ ಶಾಸಕರು ನನ್ನನ್ನು ಭೇಟಿ ಮಾಡಿ ಎಸ್.ಐ.ಟಿ ರಚಿಸಲು ಕೋರಿದರು. ಅವರ ಕೋರಿಕೆಗೆ ಸ್ಪಂದಿಸಿ ಎಸ್.ಐ.ಟಿ ರಚಿಸಿದ್ದೇವೆ. ತಪ್ಪು ಮಾಡಿದ್ದರೆ ತಾನೇ ಎಫ್ ಐ ಆರ್ ಆಗುವುದು. ನಾವು ಯಾರಿಗೂ ಕಿರುಕುಳ ನೀಡಿ ಕೇಸು ದಾಖಲಿಸಿಲ್ಲ, ಸ್ವ ಇಚ್ಛೆಯಿಂದ ಕೇಸು ದಾಖಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.