ಗುರುವಾಯನಕೆರೆ: ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಕಳವು
ಬೆಳ್ತಂಗಡಿ: ಅಂಗಡಿ ಪಕ್ಕದಲ್ಲಿ ನಿಲ್ಲಿಸಿ ಹೋಗಿದ್ದ ಬೈಕ್ ಕಳ್ಳತನ ಆಗಿರುವ ಘಟನೆ ತಾಲೂಕಿನ ಗುರುವಾಯನಕೆರೆ ಎಂಬಲ್ಲಿ ನಡೆದಿದೆ.
ವೇಣೂರು ಕರಿಮಣೀಲು ಗ್ರಾಮದ ಸಂತೋಷ್ ಕುಮಾರ್ ಎಂಬವರು ಸೆ.20ರಂದು ಮಧ್ಯಾಹ್ನ, ತನ್ನ ಕೆಎ 19 ಹೆಚ್ ಎಮ್ 3013 ಬೈಕ್ ನ್ನು ಗುರುವಾಯನಕೆರೆ ಎಂಬಲ್ಲಿರುವ ಪೀಠೋಪಕರಣ ಅಂಗಡಿಯೊಂದರ ಪಕ್ಕದಲ್ಲಿ ನಿಲ್ಲಿಸಿ ಹೋಗಿದ್ದು, ಸಂಜೆ ಬಂದು ನೋಡಿದಾಗ ಬೈಕ್ ನಿಲ್ಲಿಸಿದ ಸ್ಥಳದಲ್ಲಿ ಇರಲಿಲ್ಲ. ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಿದರೂ ಪತ್ತೆಯಾಗಿಲ್ಲ. ಬೈಕ್ ನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ಸಂತೋಷ್ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾದ ಕ್ರಮಾಂಕ: 81/2024 ಕಲಂ: 303(1) BNS ರಂತೆ ಪ್ರಕರಣ ದಾಖಲಾಗಿದೆ.