ಕರಾವಳಿ

ಬಂಟ್ವಾಳ: ಹೊಂಡಕ್ಕೆ ಪಲ್ಟಿಯಾದ ಕೆ.ಎಸ್.ಆರ್.ಟಿ.ಸಿ ಬಸ್



ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಪಲ್ಟಿಯಾಗಿದೆ.
ಮಂಗಳೂರು-ಧರ್ಮಸ್ಥಳ ಮಧ್ಯೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ಸೆ.23ರಂದು ಸಂಜೆ ವಗ್ಗ ಸಮೀಪದ ಕೊಪ್ಪಳದಲ್ಲಿ ನಡೆದಿದೆ.

ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಯುವಕರು ಬಸ್ಸಿನಿಂದ ಪ್ರಯಾಣಿಕರನ್ನು ಹೊರಗೆ ತೆಗೆಯಲು ಸಹಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!