ಪುತ್ತೂರು: ಆಂಬ್ಯುಲೆನ್ಸ್ ಮತ್ತು ಪಿಕಪ್ ನಡುವೆ ಅಪಘಾತ
ಪುತ್ತೂರು: ಆಂಬ್ಯುಲೆನ್ಸ್ ಮತ್ತು ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ ಘಟನೆ ಸೆ.23ರಂದು ರಾತ್ರಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಸಮೀಪ ಸಂಭವಿಸಿದೆ.
ಸುಳ್ಯ ಆಸ್ಪತ್ರೆಯಲ್ಲಿ ಜನಿಸಿದ ಮಗುವಿಗೆ ಬೆಳವಣಿಗೆ ಸಂಬಂಧಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಮತ್ತು ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಪಿಕಪ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆ್ಯಂಬುಲೆನ್ಸ್ ನಲ್ಲಿದ್ದ ಮಗು ಮತ್ತು ಚಾಲಕನಿಗೆ ಗಾಯವಾಗಿದೆ. ಗಾಯಾಳು ಮಗುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.