ನೆ.ಮುಡ್ನೂರು ಗ್ರಾಮ ಪಂಚಾಯತ್‌ಗೆ ಖಾಯಂ ಪಿಡಿಓ ನೇಮಕಗೊಳಿಸುವಂತೆ ಆಗ್ರಹ | ಶಾಸಕ ಅಶೋಕ್ ರೈಗೆ ಮನವಿ
ಪುತ್ತೂರು: ನೆ.ಮುಡ್ನೂರು ಗ್ರಾಮ ಪಂಚಾಯತ್‌ಗೆ ಖಾಯಂ ಪಿಡಿಓ ನೇಮಕಗೊಳಿಸುವಂತೆ ಆಗ್ರಹಿಸಿ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ನೆ.ಮುಡ್ನೂರು ಗ್ರಾ.ಪಂ ಸದಸ್ಯ ಇಬ್ರಾಹಿಂ ಕೆ ಮನವಿ ಸಲ್ಲಿಸಿದ್ದಾರೆ.
ಕಳೆದ ಒಂದೂವರೆ ವರ್ಷದಲ್ಲಿ ನೆ.ಮುಡ್ನೂರು ಗ್ರಾ.ಪಂಗೆ ನಾಲ್ಕು ಮಂದಿ ಅಭಿವೃದ್ಧಿ ಅಧಿಕಾರಿಗಳು ಕಾರ್ಯ ನಿರ್ವಹಿಸಿದ್ದು ಪ್ರಸ್ತುತ ಸುಬ್ಬಯ್ಯ ಎಂಬವರು ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪಿಡಿಓ ಸಮಸ್ಯೆಯಿಂದ ಗ್ರಾಮದ ಅಭಿವೃದ್ಧಿ ಕೆಲಸಗಳಿಗೆ ತೊಂದರೆಯುಂಟಾಗುತ್ತಿದ್ದು, ಆಡಳಿತಾತ್ಮಕ ಸಮಸ್ಯೆಯಿಂದಾಗಿ ಗ್ರಾಮದ ಜನರಿಗೆ ಸಮಸ್ಯೆಯುಂಟಾಗುತ್ತಿದೆ. ಹಾಗಾಗಿ ಪ್ರಸ್ತುತ ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಬ್ಬಯ್ಯ ಅವರನ್ನು ಖಾಯಂ ಪಿಡಿಓ ಆಗಿ ನೇಮಕಗೊಳಿಸಲು ಕ್ರಮ ವಹಿಸಬೇಕೆಂದು ಆಗ್ರಹಿಸಿ ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ.