ರಾಜಕೀಯರಾಜ್ಯ

ಸಿಎಂ ನಿವಾಸಕ್ಕೆ ಸಚಿವರ ದೌಡು: ನಾಳೆ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ





ಬೆಂಗಳೂರು: ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಸಿಕ್ಯೂಷನ್​ ಅನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಬಿರುಸಿನ ಚಟುವಟಿಕೆಗಳು ಆರಂಭ ಆಗಿದೆ.

ಸಿಎಂ ಸಿದ್ದಾರಾಮಯ್ಯ ಅವರು ಸೆ.25ರಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ಸೆ.26ರಂದು
ವಿಧಾನಸೌಧದಲ್ಲಿ ಸಚಿವ ಸಂಪುಟ ನಡೆಸಲಿದ್ದಾರೆ. ಸಭೆಯಲ್ಲಿ ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!