ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯಗೆ ರಾಜೀನಾಮೆ ನೀಡಲಿ: ವಿಜಯೇಂದ್ರ ಆಗ್ರಹ
ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ.
ಹೈಕೋರ್ಟ್ ತೀರ್ಪು ಪಕ್ಷದ ಹೋರಾಟಕ್ಕೆ ಸಂದ ಜಯವಾಗಿದ್ದು ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದು ಹೈಕೋರ್ಟ್‌ನ ತೀರ್ಪು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಹಗರಣ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಬಿಜೆಪಿ ತೀರ್ಮಾನಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಲಯದ ಆದೇಶವನ್ನು ಗೌರವಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೇ ಬಿಜೆಪಿಯ ಇನ್ನಿತರ ಅನೇಕ ನಾಯಕರು ಕೂಡಾ ಸಿಎಂ ರಾಜೀನಾಮೆಗೆ ಒತ್ತಾಯಿಸಿದ್ದಾರೆ.