ರಾಜಕೀಯರಾಜ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ನ್ಯಾಯಾಲಯ ಆದೇಶ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ನ್ಯಾಯಾಲಯ ಆದೇಶಿಸಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಈಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದೆ.

ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆ.156(3) ಅಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

Leave a Reply

Your email address will not be published. Required fields are marked *

error: Content is protected !!