ಸೆ.29: ಮಂಗಳೂರು ಪಡೀಲ್‌ನಲ್ಲಿ ‘ಜನಪ್ರಿಯ’ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ
ಮಂಗಳೂರು: ಮಂಗಳೂರು ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸೆ.29ರಂದು ಸಂಜೆ ಗಂಟೆ 4-00ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಜನಪ್ರಿಯ ಫೌಂಡೇಶನ್‌ನ ಚೇರ್‌ಮೆನ್ ಡಾ.ಅಬ್ದುಲ್ ಬಶೀರ್ ವಿ.ಕೆ ತಿಳಿಸಿದ್ದಾರೆ.

ವಿಧಾನಸಭೆಯ ಸಭಾಪತಿ ಯು.ಟಿ ಖಾದರ್ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದು ಮದರ್ &ಚೈಲ್ಡ್ ಯುನಿಟ್‌ನ್ನು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಅತಿಥಿಗಳಾಗಿ ದ.ಕ ಸಂಸದ ಕ್ಯಾ.ಬೃಜೇಶ್ ಚೌಟ, ಕಾಸರಗೋಡು ಸಂಸದ ರಾಜ್‌ಮೋಹನ್ ಉನ್ನಿತ್ತನ್, ಮಾಜಿ ಸಚಿವರಾದ ರಮಾನಾಥ ರೈ, ವಿನಯಕುಮಾರ್ ಸೊರಕೆ, ಬಿಜೆಪಿ ರಾಜ್ಯ ಪ್ರ.ಕಾರ್ಯದರ್ಶಿ ಪ್ರೀತಂ ಗೌಡ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕಾಸರಗೋಡು ಶಾಸಕ ಎನ್.ಎ ನೆಲ್ಲಿಕುನ್ನು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ದ.ಕ ಜಿಲ್ಲಾ ಎಸ್ಪಿ ಯತೀಶ್ ಎನ್, ಹಾಸನ ಸಂಸದ ಶ್ರೇಯಸ್ ಎಂ ಪಟೇಲ್, ರಾಜ್ಯ ಅಲೈಡ್ ಆಂಡ್ ಹೆಲ್ತ್ ಕೇರ್ ಕೌನ್ಸಿಲ್ ಚೇರ್‌ಮೆನ್ ಯು.ಟಿ ಇಫ್ತಿಕಾರ್ ಅಲಿ, ಮಾಜಿ ಸಚಿವ ಸಿ.ಎಂ ಇಬ್ರಾಹಿಂ, ಮಾಜಿ ಸಚಿವ, ಪ್ರಸ್ತುತ ಶಾಸಕರಾಗಿರುವ ಹೆಚ್.ಡಿ ರೇವಣ್ಣ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್, ವಿಧಾನ ಪರಿಷತ್ ಸದಸ್ಯ ಬಿ.ಎಂ ಫಾರೂಕ್, ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಮಂಗಳೂರು ಮೇಯರ್ ಮನೋಜ್ ಕುಮಾರ್ ಕೋಡಿಕಲ್, ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ, ಜಿ.ಪಂ ಮಾಜಿ ಉಪಾಧ್ಯಕ್ಷ ಎಂ.ಎಸ್ ಮುಹಮ್ಮದ್, ಕಾರ್ಪೋರೇಟರ್ ರೂಪಶ್ರೀ ಪೂಜಾರಿ, ಹೈಸಮ್ ಸ್ಟೀಲ್ ಇದರ ಶಕೀರ್ ಹಾಜಿ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಖಾಸಗಿ ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್ ಅಸೋಸಿಯೇಶನ್ ಇದರ ಅಧ್ಯಕ್ಷ ಡಾ.ಅಜಿತ್ ಕುಮಾರ್ ಎಂ, ಮಂಗಳೂರು ಸಿಟಿ ಕಾರ್ಪೊರೇಶನ್ ಕಮಿಷನರ್ ಆನಂದ್ ಕೆಎಎಸ್, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಭಂಡಾರಿ, ಎಸ್‌ಡಿಪಿಐ ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು, ಕಣ್ಣೂರು ಕಾರ್ಪೊರೇಟರ್ ಚಂದ್ರಾವತಿ ವಿಶ್ವನಾಥ್, ಎಸ್‌ಎಂಆರ್ ಗ್ರೂಪ್‌ನ ಚೇರ್‌ಮೆನೆ ಎಸ್.ಎಂ ರಶೀದ್ ಹಾಜಿ, ಐಎಂಎ ಮಂಗಳೂರು ಇದರ ಅಧ್ಯಕ್ಷ ಡಾ.ರಂಜನ್ ಆರ್.ಕೆ, ಐಡಿಎ ಮಂಗಳೂರು ಇದರ ಅಧ್ಯಕ್ಷ ಅರವಿಂದ್ ಕಾಟಿಪಳ್ಳ, ಮಂಗಳೂರು ನ್ಯೂ ಭಾರತ್ ಇನ್ಫ್ರಾಸ್ಟ್ರಕ್ಚರ್ ಇದರ ಎಸ್.ಎಂ ಮುಸ್ತಫಾ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.