ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸೆ25ರಂದು ಹರಿಯಾಣ ಚುನಾವಣ ಪ್ರಚಾರ ಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೆಂದ್ರ ಮೋದಿ ಸಿದ್ದರಾಮಯ್ಯ ಅವರ ಮೇಲಿನ ಮುಡಾ ಹಗರಣ ವಿಚಾರದ ಬಗ್ಗೆ ಮಾತನಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಎರಡೇ ವರ್ಷದೊಳಗೆ ಕರ್ನಾಟಕ ರಾಜ್ಯವನ್ನು ಕುಲಗೆಡಿಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿಯ ವಿರುದ್ಧ ಭೂ ಹಗರಣದ ಆರೋಪವಿದೆ. ಕರ್ನಾಟಕ ಹೈಕೋರ್ಟ್ ಕಾಂಗ್ರೆಸ್ ಸಿಎಂ ವಿರುದ್ಧ ತನಿಖೆ ನಡೆಸಲು ಆದೇಶ ನೀಡಿದೆ ಎಂದು ತಿಳಿಸಿದ್ದಾರೆ.
”ಕಾಂಗ್ರೆಸ್‌ನ ರಾಜಮನೆತನವು ದೇಶದ ಅತ್ಯಂತ ಭ್ರಷ್ಟ ಕುಟುಂಬವಾಗಿದ್ದು, ಹೈಕಮಾಂಡ್ ಭ್ರಷ್ಟವಾಗಿರುವಾಗ, ಕೆಳಗೆ ಲೂಟಿ ಮಾಡಲು ಮುಕ್ತ ಪರವಾನಗಿ ಇದೆ, ದಲಿತರಿಗೆ ಮೀಸಲಾಗಿದ್ದ ಅನುದಾನವನ್ನೂ ಕಾಂಗ್ರೆಸ್‌ನವರು ದುರ್ಬಳಕೆ ಮಾಡಿಕೊಂಡಿದ್ದಾರೆ. ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷದಷ್ಟು ನಂಬಿಕೆದ್ರೋಹದ ಪಕ್ಷ ಇನ್ನೊಂದಿಲ್ಲ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.