ಕರಾವಳಿಕ್ರೈಂ

ಸುಳ್ಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಬಂಧನ

ಸುಳ್ಯ: ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಥಳಿತಕ್ಕೆ ಒಳಗಾಗಿ ಕೇರಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ನಿಯಾಜ್ ಎಂಬಾತನನ್ನು  ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯ ಬಳಿಕ ಆರೋಪಿ ನಿಯಾಜ್ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಬಳಿಕ ಅಲ್ಲಿಂದ ತೆರಳಿ ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆತನನ್ನು ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆ ವತಿಯಿಂದ ಸುಳ್ಯ ಪೊಲೀಸ್ ಠಾಣಾ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಅಗ್ರಹಿಸಲಾಗಿತ್ತು.

ಇದೀಗ ಆತನನ್ನು ಸುಳ್ಯ ಪೋಲಿಸರು ಬಂಧಿಸಿ ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!