ರಾಜಕೀಯರಾಜ್ಯ

ಪ್ರಧಾನಿ ಮೋದಿಗೆ ನೈತಿಕತೆ ಇದೆಯಾ? ಸರಣಿ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ಮುಡಾ ಹಗರಣದಲ್ಲಿ ತನಿಖೆಗೆ ಆದೇಶ ದೊರೆತ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಬಗ್ಗೆ ರ‍್ಯಾಲಿಯೊಂದರಲ್ಲಿ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿಗೆ ಇದೀಗ ಮುಖ್ಯಮಂತ್ರಿಗಳು ಎಕ್ಸ್ ಸಂದೇಶದ ಮೂಲಕ ತಿರುಗೇಟು ನೀಡಿದ್ದಾರೆ. ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ನೈತಿಕತೆ ಇದೆಯೇ ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ? ತಮ್ಮ ಪಕ್ಷದ ಮುಖ್ಯಮಂತ್ರಿ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದ್ದರೂ ಅವರ ಮೇಲೆ ಕ್ರಮ ಇಲ್ಲ. ದಿನ ಬೆಳಗಾದರೆ ಭ್ರಷ್ಟಾಚಾರದ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ಧವೂ ಯಾವ ಕ್ರಮವೂ ಇಲ್ಲ. ನರೇಂದ್ರ ಮೋದಿ ಅವರೇ ಈ ಮೌನಕ್ಕೆ, ಈ ನಿಷ್ಕ್ರಿಯತೆಗೆ ಏನು ಕಾರಣ? ಈ ಭ್ರಷ್ಟಾಚಾರದಲ್ಲಿ ನೀವೂ ಭಾಗಿದಾರರೆಂದು ತಿಳಿದುಕೊಳ‍್ಳಬಹುದೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!