ತಿರುಪತಿ ಲಡ್ಡು ವಿವಾದ ಹಿನ್ನೆಲೆ: 9 ಸದಸ್ಯರನ್ನೊಳಗೊಂಡ SIT ರಚಿಸಿದ ಆಂಧ್ರ ಸರ್ಕಾರ
ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ತನಿಕೆ ನಡೆಸಲು ಚಂದ್ರಬಾಬು ನಾಯ್ದು ನೇತೃತ್ವದ ಆಂಧ್ರಪ್ರದೇಶ ಸರ್ಕಾರವು 9 ಸದಸ್ಯರ ವಿಶೇಷ ತನಿಖಾ ತಂಡ ತಂಡವನ್ನು ರಚಿಸಿದೆ.
ಗುಂಟೂರು ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಸರ್ವಶ್ರೇಷ್ಠ ತ್ರಿಪಾಠಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ತಿರುಮಲದಲ್ಲಿ ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಆಡಳಿತಾವಧಿಯಲ್ಲಿ ನಡೆದಿರುವ ಇತರ ಅಕ್ರಮಗಳ ಬಗ್ಗೆಯೂ ಎಸ್‌ಐಟಿ ತನಿಖೆ ನಡೆಸಲಿದೆ ಎಂದು ತಿಳಿದು ಬಂದಿದೆ.