ರಾಜಕೀಯರಾಜ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್.ಐ.ಆರ್ ದಾಖಲು

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್​ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ​ಐಆರ್ ದಾಖಲಾಗಿದೆ.

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ನೇತೃತ್ವದಲ್ಲಿ ಎಫ್ ಐಆರ್ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!