ಬೆಳ್ಳಾರೆ ಮಸೀದಿ ವಿರುದ್ದ ಅಪಪ್ರಚಾರ ಆರೋಪ: ಪೊಲೀಸ್ ಠಾಣೆಗೆ ದೂರು
ಬೆಳ್ಳಾರೆ: ಬೆಳ್ಳಾರೆ ಮಸೀದಿ ವಿರುದ್ದ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಬೆಳ್ಳಾರೆ ಮಸೀದಿಯ ಆಡಳಿತ ಮಂಡಳಿಯವರು ನಿಂತಿಕಲ್ ಸಮೀಪದ ಸಮಹಾದಿ ನಿವಾಸಿ ಇಬ್ರಾಹಿಂ ಖಲೀಲ್ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸೆ.27 ರಂದು ದೂರು ನೀಡಿರುವುದಾಗಿ ತಿಳಿದು ಬಂದಿದೆ.
ಇಬ್ರಾಹಿಂ ಖಲೀಲ್ ಎಂಬಾತ
ಕೆಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಂಘ ಸಂಸ್ಥೆ, ಗುಂಪು, ಪಂಗಡಗಳ, ವಿರುದ್ಧ ತಕರಾರು ಎತ್ತಿ ದ್ವೇಷ ಹರಡಿ ಸುಳ್ಳು ದ್ವೇಷ ಬರಹಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬರೆಯುತ್ತಿದ್ದು
ವೈಷಮ್ಯ ವೈರಾಗ್ಯ , ಕೋಮು ಪ್ರಚೋದನೆ ಬರುವ ರೀತಿಯಲ್ಲಿ ಬರೆದಿದ್ದು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷರಾದ ಯು. ಹೆಚ್. ಅಬೂಬಕ್ಕರ್ ಹಾಜಿ, ಕಾರ್ಯದರ್ಶಿ ಬಸೀರ್ ಕಲ್ಲಪಣೆ, ಸಹಿತ ಜಮಾತ್ ಪದಾಧಿಕಾರಿಗಳು, ಸದಸ್ಯರು, ಜಮಾತರು ತೆರಳಿ ದೂರು ನೀಡಿರುವುದಾಗಿ ತಿಳಿದುಬಂದಿದೆ.