ಕರಾವಳಿಕ್ರೈಂ

ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ಪ್ರಕರಣ ಆರೋಪಿಯ ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು



ವಿಟ್ಲ : ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ದೌರ್ಜನ್ಯ ಎಸೆಗಿದ್ದ ಆರೋಪಿಯ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಕೆಲವು ದಿನಗಳ ಹಿಂದೆ ಕುದ್ದುಪದವು ನಿವಾಸಿ ಅಶ್ರಫ್ ಎಂಬಾತ ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಶ್ರಫ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಒಂದು ವಾರದಲ್ಲಿ ಆರೋಪಿಗೆ ಜಾಮೀನು ಮಂಜೂರಾಗಿತ್ತು.

ಇದೀಗ ಆರೋಪಿ ಅಶ್ರಫ್ ನ ಗೂಡಂಗಡಿಗೆ ಯಾರೋ ಕಿಡಿಗೇಡಿಗಳು ನಿನ್ನೆ ತಡರಾತ್ರಿ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ತಡರಾತ್ರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಗಮನಿಸಿದ ರಸ್ತೆಯಲ್ಲಿ ತೆರಳುತ್ತಿದ್ದ ವಾಹನ ಚಾಲಕರು ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ .

Leave a Reply

Your email address will not be published. Required fields are marked *

error: Content is protected !!