ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಯುವ ಮುಖಂಡ ಯು.ಟಿ ತೌಸೀಫ್ ನೇಮಕ
ಪುತ್ತೂರು: ನೂತನವಾಗಿ ಅಸ್ತಿತ್ವಕ್ಕೆ ಬಂದ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಯುವ ಮುಖಂಡ, ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ಯು.ಟಿ ತೌಸೀಫ್ ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ಉಪ್ಪಿನಂಗಡಿ ನಿವಾಸಿಯಾಗಿರುವ ಯು.ಟಿ ತೌಸೀಫ್ ಅವರು ವಿದ್ಯಾರ್ಥಿ ಜೀವನದಲ್ಲೇ ಕಾಂಗ್ರೆಸ್ ಪರ ಒಲವು ಹೊಂದಿದ್ದರು. ಎನ್.ಎಸ್.ಯು.ಐ ಕಾಲೇಜು ಅಧ್ಯಕ್ಷರಾಗಿ, ಎನ್.ಎಸ್.ಯು.ಐ ಪುತ್ತೂರು ತಾಲೂಕು ಉಪಾಧ್ಯಕ್ಷರಾಗಿ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಅವರು ಯುವ ಕಾಂಗ್ರೆಸ್ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಪ್ರಸ್ತುತ ಉಪ್ಪಿನಂಗಡಿ ಗ್ರಾ.ಪಂ ಸದಸ್ಯರಾಗಿರುವ ಯು.ಟಿ ತೌಸೀಫ್ ಅವರು ಮೂರು ಬಾರಿ ಉಪ್ಪಿನಂಗಡಿ ಗ್ರಾ.ಪಂ ಸದಸ್ಯರಾಗಿ ಚುನಾಯಿತರಾಗಿದ್ದಾರೆ. ಅಪ್ಪಟ ಜಾತ್ಯತೀತವಾದಿಯಾಗಿರುವ ಇವರು ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು
ಅನೇಕ ಜನಪರ ಹೋರಾಟಗಳಲ್ಲೂ ತೊಡಗಿಸಿಕೊಂಡಿದ್ದರು. ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿಯೂ ತೊಡಗಿಸಿಕೊಂಡಿರುವ ಯು.ಟಿ ತೌಸೀಫ್ ಅವರು ಅನೇಕ ಸಂಘ ಸಂಸ್ಥೆಗಳಲ್ಲೂ ಸಕ್ರಿಯವಾಗಿದ್ದಾರೆ.
ಸಕ್ರಿಯ ಕಾರ್ಯಕರ್ತ ಯು.ಟಿ ತೌಸೀಫ್ ಅವರಿಗೆ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಸಿಕ್ಕಿರುವುದಕ್ಕೆ ಅವರ ಹಿತೈಷಿಗಳು, ಬೆಂಬಲಿಗರು ಹರ್ಷ ವ್ಯಕ್ತಪಡಿಸಿದ್ದಾರೆ.