ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿ ಬಿಡುತ್ತಾನೆಯೇ? ಆರ್ ಅಶೋಕ್
ಬೆಂಗಳೂರು: 14 ನಿವೇಶಗಳನ್ನು ವಾಪಡ್ ನೀಡುವುದಾಗಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿರುವ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರುವುದಿಲ್ಲ, ಆದರೆ ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ ಎಂದಿದ್ದಾರೆ.