ವಿಧಾನಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಅವರನ್ನು ಅಭಿನಂದಿಸಿದ ನಳಿನ್ ಕುಮಾರ್
ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು ಕಿಶೋರ್ ಕುಮಾರ್ ಅವರ ಗೆಲುವು ನಿಶ್ಚಿತ, ಹೆಚ್ಚಿನ ಮತಗಳಿಂದ ಗೆದ್ದು ಪಕ್ಷದ ಹಾಗೂ ಕ್ಷೇತ್ರದ ಧ್ವನಿಯಾಗಲಿ ಎಂದು ಶುಭ ಹಾರೈಸಿದರು. ಶಾಸಕ ಭರತ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.