ವಿಟ್ಲ: ಮನೆಗೆ ನುಗ್ಗಿ ಬೆಲೆ ಬಾಳುವ ವಸ್ತುಗಳನ್ನು ಕದ್ದೊಯ್ದ ಕಳ್ಳರು
ವಿಟ್ಲ: ಮನೆಗೆ ನುಗ್ಗಿದ ಕಳ್ಳರು ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿರುವ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರೋಪಾಡಿ ನಿವಾಸಿ, ಪ್ರಸ್ತುತ ಮೈಸೂರಿನಲ್ಲಿರುವ ಡಾ. ಬಿ. ಕೃಷ್ಣರಾಜ್ ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಕೃಷ್ಣರಾಜ್ ರವರ ಪ್ರಸ್ತುತ ಮೈಸೂರಿನಲ್ಲಿ ಕುಟುಂಬ ಸಮೇತರಾಗಿ ವಾಸಮಾಡಿಕೊಂಡಿದ್ದು, ಪಿತ್ರಾರ್ಜಿತವಾಗಿ ಬಂದ ಕೃಷಿ ಭೂಮಿ ಮತ್ತು ಮನೆ ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಬೇತ ಎಂಬಲ್ಲಿ ಇದ್ದು, ಸಂಕಪ್ಪ ಶೆಟ್ಟಿ ಎಂಬವರು ನೋಡಿಕೊಳ್ಳುತ್ತಿದ್ದಾರೆ.