ಅರಂತೋಡು ಗ್ರಾ.ಪಂ ಸ್ವಚ್ಛತಾ ಮೇಲ್ವಿಚಾರಕಿ ಸೌಮ್ಯ ಲತಾರಿಗೆ ‘ಸ್ವಚ್ಛತಾ ಹೀ ಸೇವಾ ಆಂದೋಲನ’ ಪುರಸ್ಕಾರ
ಸುಳ್ಯ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜನಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರ ಸಚಿವಾಲಯ ಗ್ರಾಮಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತಿನ ಸ್ವಚ್ಛತಾ ಮೇಲ್ವಿಚಾರಕಿ ಸೌಮ್ಯ ಲತಾ ರವರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲನ್ ಮುಗಿಲನ್ ಅವರು ಸಮಾರಂಭದಲ್ಲಿ ಪ್ರಮಾಣ ಪತ್ರ ಮತ್ತು ಶಾಶ್ವತ ಫಲಕ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಸ್ವಚ್ಛತಾ ಸಹಾಯಕಿಯರಾದ ವಿಜಯಲಕ್ಷ್ಮಿ, ಶಾಲಿನಿ ಮತ್ತು ಜಲಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.