ಬಂಟ್ವಾಳ: ಬೈಕ್ ಗಳ ಮಧ್ಯೆ ಅಪಘಾತ, ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು
ಬಂಟ್ವಾಳ: ದ್ವಿಚಕ್ರಗಳೆರಡರ ಮಧ್ಯೆ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಅ.2ರಂದು ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಬರಿಮಾರು ನಿವಾಸಿ ಸರ್ಪಾಝ್ (33ವ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅ.3ರಂದು ನಡೆದಿದೆ.
ಸರ್ಪಾಝ್ ತನ್ನ ತಂಗಿಯನ್ನು ದೇರಳಕಟ್ಟೆ ಕಾಲೇಜಿಗೆ ಸ್ಕೂಟರ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ಮೆಲ್ಕಾರ್ ನಿಂದ ಮುಡಿಪು ಮಾರ್ಗವಾಗಿ ಮಾರ್ನಬೈಲು ತಲುಪಿದಾಗ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ.