ರಾಜಸ್ಥಾನ: 200 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಬಾಲಕಿ
ರಾಜಸ್ಥಾನ: ರಾಜ್ಯದ ದೌಸಾ ಜಿಲ್ಲೆಯ ಅಭನೇರಿ ಬಳಿಯ ಜಸ್ಸಾ ಪಾಡಾ ಹಳ್ಳಿಯಲ್ಲಿ 2 ವರ್ಷದ ಬಾಲಕಿಯೊಬ್ಬಳು 200 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ. 60ರಿಂದ 70 ಅಡಿ ಆಳದಲ್ಲಿ ಬಾಲಕಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ಪೊಲೀಸರು ಹಾಗೂ ಎಸ್‌ಡಿಆರ್‌ಎಫ್ ಮೂಲಕ ರಕ್ಷಣೆಗೆ ಪ್ರಯತ್ನಿಸಲಾಗುತ್ತಿದೆ. ಪೈಪ್ ಮೂಲಕ ಆಕ್ಸಿಜನ್ ಪೂರೈಸಲಾಗುತ್ತಿದೆ ಎಂದು ವರದಿಯಾಗಿದೆ.