ರಾಜ್ಯ

ಹಬ್ಬಕ್ಕೂ ಮೊದಲು ಬರುತ್ತೆ ಗೃಹಲಕ್ಷ್ಮಿ ಯೋಜನೆ 2 ಕಂತಿನ ಹಣ



ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಹಣ ಬಿಡುಗಡೆಗೆ ರಾಜ್ಯ ಸರ್ಕಾರ ದಿನಾಂಕ ಘೋಷಣೆ ಮಾಡಿದ್ದು ಅಕ್ಟೋಬರ್‌ 7 ಹಾಗೂ 9 ರಂದು ಎರಡು ಕಂತಿನ ಫಲಾನುಭವಿ ಮನೆಯ ಯಜಮಾನಿಯರಿಗೆ ಸಂದಾಯವಾಗಲಿದೆ ಎಂದು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದಾರೆ.


ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಅ.2ರಂದು ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ‌ ಹಾಕುವುದು ವಿಳಂಬವಾಗಿತ್ತು, ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆಲ್ಲಾ (ಫಲಾನುಭವಿ ಮಹಿಳೆಯರಿಗೆ) ಬರುತ್ತಿದ್ದು, ಹಣ ಸಿಕ್ಕ ಬಳಿಕ‌ ಭರ್ಜರಿಯಾಗಿ ಹಬ್ಬ ಆಚರಿಸಿ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!