ರಾಜಕೀಯರಾಜ್ಯರಾಷ್ಟ್ರೀಯ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದಿಢೀರ್ ಭೇಟಿಯಾದ ಸತೀಶ್ ಜಾರಕಿಹೊಳಿ: ರಾಜಕೀಯ ವಲಯದಲ್ಲಿ ಕುತೂಹಲ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಕೇಸ್ ಸದ್ದು ಮಾಡುತ್ತಿರುವ ವೇಳೆಯಲ್ಲೇ ಸಚಿವ ಸತೀಶ್ ಜಾರಕಿಹೊಳಿ ಅವರು ದಿಢೀರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

 ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಖರ್ಗೆ ಅವರ ಜೊತೆ ಸತೀಶ್ ಜಾರಕಿಹೊಳಿ ಚರ್ಚೆ ನಡೆಸಿದ್ದು ಸಿಎಂ ರಾಜೀನಾಮೆಗೆ ಬಿಜೆಪಿ ಮತ್ತು ಜೆಡಿಎಸ್ ಆಗ್ರಹಿಸುತ್ತಿರುವ ಈ ಸಂದರ್ಭದಲ್ಲಿನ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಭೇಟಿಯಾಗಿರುವ ಸತೀಶ್ ಜಾರಕಿಹೊಳಿ, ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಎದುರಾದರೆ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ನಾಯಕರಿಗೆ ಸಿಎಂ ಸ್ಥಾನ ಸಿಗಬೇಕು. ಇದಕ್ಕೆ ನಾವೆಲ್ಲ ಒಗ್ಗಟ್ಟಾಗಿ ನಿಂತು ಸಿಎಂ ಸ್ಥಾನವನ್ನು ಸಮುದಾಯಕ್ಕೆ ಪಡೆಯಬೇಕು ಎನ್ನುವ ನಿಟ್ಟಿನಲ್ಲಿ ಖರ್ಗೆ ಅವರ ಜೊತೆಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Leave a Reply

Your email address will not be published. Required fields are marked *

error: Content is protected !!