ವೈವಾಹಿಕ ಜೀವನಕ್ಕೆ ಕಾಲಿರಿಸಿದ ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಆಲ್ ರೌಂಡರ್ ರಶೀದ್ ಖಾನ್
ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಆಲ್ ರೌಂಡರ್ ರಶೀದ್ ಖಾನ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅ.3 ರಂದು ಕಾಬೂಲ್ನ ಇಂಪೀರಿಯಲ್ ಕಾಂಟಿನೆಂಟಲ್ ಹೋಟೆಲ್‌ನಲ್ಲಿ ಅಫ್ಘಾನಿಸ್ತಾನ ಸಂಪ್ರದಾಯದ ಪ್ರಕಾರ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.
ಈ ವೇಳೆ ಅಫ್ಘಾನಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡದ ಆಟಗಾರರು, ಗಣ್ಯರು ಹಾಜರಿದ್ದು ಶುಭ ಹಾರೈಸಿದ್ದಾರೆ. ಇದೇ ವೇಳೆ ರಶೀದ್ ಖಾನ್ ಅವರ ಜೊತೆಯೇ ರಶೀದ್ ಅವರ ಸಹೋದರ ಜಖೀವುಲ್ಲಾ ಖಾನ್ ಹಾಗೂ ಇಬ್ಬರು ಸೋರಳಿಯರು ಮದುವೆಯಾಗಿದ್ದಾರೆ. ಒಂದೇ ವೇದಿಕೆಯಲ್ಲಿ ನಾಲ್ವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಫ್ಘಾನಿಸ್ತಾನ ಕ್ರಿಕೆಟ್ ಅಸೋಸಿಯೇಷನ್ ಮದುವೆಯ ಫೋಟೊಗಳನ್ನು ಹಂಚಿಕೊಂಡು ಎಕ್ಸ್‌ನಲ್ಲಿ ಶುಭ ಕೋರಿದೆ.