ದ್ವೇಷ ಭಾಷಣ ಆರೋಪ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್
ಮಂಗಳೂರು: ಧರ್ಮ ದ್ವೇಷದ ಭಾಷಣ ಆರೋಪದಡಿ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಂಗಳೂರು ಸೆನ್ ಪೊಲೀಸರು ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ನಡೆದ ನವದಂಪತಿ ಸಮಾವೇಶದಲ್ಲಿ ಭಾಷಣ ಮಾಡಿದ್ದ ಡಾ.ಅರುಣ್ ಉಳ್ಳಾಲ್, ಧರ್ಮ ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನಲೆಯಲ್ಲಿ ಕೇಸ್ ದಾಖಲಾಗಿದೆ.
ಡಾ.ಅರುಣ್ ಉಳ್ಳಾಲ್ ಭಾಷಣದಲ್ಲಿ ‘ಹಿಂದುಗಳು ಹಿಂದು ಮಾಲಿಕತ್ವದ ಸಭಾಂಗಣದಲ್ಲೆ ಮದುವೆ ಆಗಬೇಕು. ಹಿಂದು ಮಾಲಿಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು. ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು. ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಹೋಗುತ್ತದೆ ಎಂದೆಲ್ಲಾ ಇನ್ನೊಂದು ಧರ್ಮವನ್ನು ನಿಂದಿಸುವ ರೀತಿಯಲ್ಲಿ ದ್ವೇಷ ಭಾಷಣ ಮಾಡಿದ್ದರುಎಂ ಆ ಭಾಷಣ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.