ಪ್ರವಾದಿ ಕುರಿತು ಆಕ್ಷೇಪಾರ್ಹ ಹೇಳಿಕೆ: ಯತಿ ನರಸಿಂಹಾನಂದ ಬಂಧನ
“ಪ್ರವಾದಿ ಮುಹಮ್ಮದ್ ಪೈಗಂಬರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ದಾಸ್ನಾ ದೇವಿ ದೇವಸ್ಥಾನದ ಮಹಾಂತ ಯತಿ ನರಸಿಂಹಾನಂದ ಸರಸ್ವತಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಗಾಜಿಯಾಬಾದ್‌ನ ಲೋಹಿಯಾ ನಗರದ ಹಿಂದಿ ಭವನದಲ್ಲಿ ಸೆ.29ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಯತಿ ನರಸಿಂಹಾನಂದ ಉದ್ರೇಕಕಾರಿ ಭಾಷಣ ಮಾಡಿ ಮುಸ್ಲಿಂ ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲಿಸಲಾದ ಬಳಿಕ ಉತ್ತರಪ್ರದೇಶದ ಅನೇಕ ಭಾಗಗಳಲ್ಲಿ ಮುಸ್ಲಿಂ ಸಮುದಾಯದವರು ಬೃಹತ್ ಪ್ರತಿಭಟನೆಗಳನ್ನು ನಡೆಸಿ ಯತಿ ನರಸಿಂಹಾನಂದ ಬಂಧನಕ್ಕೆ ಆಗ್ರಹಿಸಿದ್ದರು.