ನಾಪತ್ತೆಯಾಗುವ ಮುನ್ನ ವಾಯ್ಸ್ ಮೆಸೇಜ್ ಕಳುಹಿಸಿದ್ದ ಮಮ್ತಾಜ್ ಅಲಿ?
ಮಂಗಳೂರು: ಮಾಜಿ ಶಾಸಕ ಮೊಯ್ದಿನ್ ಬಾವಾ ಅವರ ಸಹೋದರ ಮಮ್ತಾಜ್ ಅಲಿ ನಾಪತ್ತೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎನ್ನುವ ಸಂಶಯ ಹೆಚ್ಚಿದೆ.
ಇಂದು ನಸುಕಿನ ಜಾವ ಮೂರು ಗಂಟೆ ವೇಳೆಗೆ ಮುಮ್ತಾಜ್ ಅಲಿ ಮನೆಯಿಂದ ಹೊರಟಿದ್ದು ಈ ವೇಳೆ ತಮ್ಮ ಫ್ಯಾಮಿಲಿ ಗ್ರೂಪಿನಲ್ಲಿ ವಾಯ್ಸ್ ಮೆಸೇಜ್ ಹಾಕಿದ್ದರು ಎನ್ನಲಾಗಿದೆ.
ಈ ಎಲ್ಲಾ ವಿಚಾರಗಳನ್ನು ಗಮನಿಸುವಾಗ ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ಬಲವಾಗಿ ವ್ಯಕ್ತವಾಗಿದೆ. ಇನ್ನೊಂದು ಮಾಹಿತಿ ಪ್ರಕಾರ ಮಮ್ತಾಜ್ ಅಲಿ ಉದ್ಯಮದಲ್ಲಿ ನಷ್ಟ ಅನುಭವಿಸಿದ್ದರು ಎಂದೂ ಹೇಳಲಾಗುತ್ತಿದೆ. ಆದರೆ ಯಾವುದೂ ಸ್ಪಷ್ಟವಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.