ಸಿಗದ ಮುಮ್ತಾಜ್ ಅಲಿ ಸುಳಿವು
ಮಂಗಳೂರು: ಉದ್ಯಮಿ ಮಮ್ತಾಜ್ ಆಲಿ ಅವರ ನಾಪತ್ತೆ ಪ್ರಕರಣ ನಿಗೂಢವಾಗಿಯೇ ಮುಂದುವರಿದಿದ್ದು ಅ6ರಂದು ರಾತ್ರಿಯವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.

ಕೂಳೂರು ಸೇತುವೆಯ ಮೇಲಿನಿಂದ ನದಿಗೆ ಹಾರಿರಬಹುದು ಎಂಬ ಸಂಶಯದ ಮೇರೆಗೆ ನಿರಂತರ ಶೋಧ ನಡೆಸಿದರೂ ಸುಳಿವು ಸಿಕ್ಕಿಲ್ಲ ಇದರಿಂದಾಗಿ ಪ್ರಕರಣ ಕಗ್ಗಂಟಾಗಿಯೇ ಉಳಿದಿದೆ. ಇದರ ಜತೆಗೆ ಮಮ್ತಾಜ್ ಆಲಿಯವರು ಬ್ಲ್ಯಾಕ್ ಮೇಲ್‌ಗೆ ಒಳಗಾಗಿದ್ದರು, ಹನಿ ಟ್ರ್ಯಾಪ್ ಮಾಡಲಾಗಿತ್ತು ಎಂಬ ಶಂಕೆ ಕೂಡ ವ್ಯಕ್ತವಾಗಿದ್ದು ಪೊಲೀಸರು ಆ ದಿಕ್ಕಿನಿಂದಲೂ ತನಿಖೆ ಮುಂದುವರಿಸಿದ್ದಾರೆ ಎನ್ನಲಾಗಿದೆ.
ನಿನ್ನೆ ಬೆಳಗ್ಗೆ 7.30ರಿಂದಲೇ ಶೋಧ ಕಾರ್ಯ ಆರಂಭವಾಗಿ ತಡರಾತ್ರಿವರೆಗೂ ಮುಂದುವರಿದಿತ್ತು. ಮಳೆ ಹಿನ್ನೆಲೆಯಲ್ಲಿ ಕೆಲ ಕಾಲ ಸ್ಥಗಿತಗೊಳಿಸಲಾಯಿತು. ಕೂಳೂರು ಭಾಗದಿಂದ ಬೆಂಗ್ರೆ ಹಾಗೂ ಕುದ್ರುವರೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಸಾರ್ವಜನಿಕರು ಸೇತುವೆ ಮೇಲೆ ನಿಂತು ವೀಕ್ಷಿಸುತ್ತಿದ್ದರಿಂದ ವಾಹನ ಸಂಚಾರಕ್ಕೂ ಅಡ್ಡಿಯುಂಟಾಯಿತು. ಸ್ಥಳದಲ್ಲಿ ಕೆಎಸ್‌ಆರ್‌ಪಿ ಪೊಲೀಸ್ ತುಕಡಿಯೊಂದನ್ನು ನಿಯೋಜಿಸಲಾಗಿತ್ತು. ಮಮ್ತಾಜ್ ಅಲಿ ನಿಗೂಢ ನಾಪತ್ತೆ ಪ್ರಕರಣ ನಿಗೂಢವಾಗಿಯೇ ಮುಂದುವರಿದಿದ್ದು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.