ಮಂಗಳೂರು: ರವಿವಾರ ಮುಂಜಾನೆ ನಾಪತ್ತೆಯಾಗಿದ್ದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸಹೋದರ, ಮಿಸ್ಬಾ ಸಮೂಹ ಶಿಕ್ಷಣ ಸಂಸ್ಥೆಗಳ ಚೇರ್‌ಮನ್ ಮಮ್ತಾಜ್ ಅಲಿ ಅವರ ಮೃತದೇಹ ಪತ್ತೆಯಾಗಿದೆ.
ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.