ಹರಿಯಾಣ, ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ ಮತ ಎಣಿಕೆ ಆರಂಭ
ನವದೆಹಲಿ: ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ಚುನಾವಣಾ ಫಲಿತಾಂಶ ಅ.8ರಂದು ಹೊರಬೀಳಲಿದೆ. 10 ವರ್ಷಗಳ ಬಳಿಕ, ಆರ್ಟಿಕಲ್ 370 ರದ್ದಾದ ಬಳಿಕ ಜಮ್ಮು ಕಾಶ್ಮೀರದಲ್ಲಿ ನಡೆದ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲೋದು ಯಾರು ಎನ್ನುವ ತೀವ್ರ ಕುತೂಹಲ ಉಂಟಾಗಿದೆ. ಇನ್ನು ಹರಿಯಾಣ ವಿಧಾನಸಭೆ ಯಾರ ಪಾಲಾಗಲಿದೆ ಎನ್ನುವ ಕೂತೂಹಲ ಗರಿಗೆದರಿದೆ.
ಇತ್ತೀಚಿನ ಮಾಹಿತಿ ಪ್ರಕಾರ ಹರಿಯಾಣದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. 38 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದಾರೆ 15 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಮತ್ತು ಬಿಜೆಪಿ ತಲಾ 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.