ಮುಮ್ತಾಜ್ ಅಲಿ ಪ್ರಕರಣ: ಬ್ಲ್ಯಾಕ್’ಮೇಲ್ ಷಡ್ಯಂತ್ರ ರೂಪಿಸಿದವರಿಗೆ ಕಠಿಣ ಶಿಕ್ಷೆಯಾಗಲಿ-ಜಿ.ಎ ಶಂಸುದ್ದೀನ್ ಅಜ್ಜಿನಡ್ಕ
ಮಂಗಳೂರು: ಕರಾವಳಿ ಜಿಲ್ಲೆಯ ಪ್ರಸಿದ್ಧ ಮುಸ್ಲಿಂ ಸಮುದಾಯದ ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ಕ್ಷೇತ್ರದ ಮುಖಂಡ ಹಲವಾರು ಸಂಘ ಸಂಸ್ಥೆಗಳಲ್ಲಿ ಯಶಸ್ವಿ ಸಂಘಟಕರಾಗಿ ಸಮಾಜದ ಎಲ್ಲಾ ವರ್ಗದ ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುತ್ತಿದ್ದ ಉದ್ಯಮಿ ಮುಮ್ತಾಜ್ ಅಲಿ ಅವರ ಅಕಾಲಿಕ ನಿಧನ ಇಡೀ ಮುಸ್ಲಿಂ ಸಮುದಾಯಕ್ಕೆ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ ಎಂದು ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಹೇಳಿದ್ದಾರೆ.

ಉದ್ಯಮಿ ಮುಮ್ತಾಜ್ ಅಲಿ ಅವರನ್ನು ಬ್ಲ್ಯಾಕ್ಮೆಲ್ ಮೂಲಕ ಷಡ್ಯಂತ್ರ ರೂಪಿಸಿ ಅವರ ಜೀವವನ್ನು ತೆಗೆಯುವ ಹಂತಕ್ಕೆ ಕಾರಣಕರ್ತರಾದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಿ ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಇಂತಹ ಘಟನೆ ಆಗದಂತೆ ಪೋಲಿಸ್ ಇಲಾಖೆ ಎಚ್ಚರಿಕೆ ನಡೆ ಇಡಬೇಕು ಎಂದು ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ