ಕರಾವಳಿ

ಎ ಕೆ ಗ್ರೂಪ್ ಸಂಸ್ಥಾಪಕ ಎ ಕೆ ಅಹ್ಮದ್ ನಿಧನ

ಮಂಗಳೂರು: ಎ ಕೆ ಸಮೂಹ ಸಂಸ್ಥೆಗಳ ಸ್ಥಾಪಕ ಎ ಕೆ ಅಹ್ಮದ್ (76ವ) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಹೈಲ್ಯಾಂಡ್ ನ ಇಹ್ಸಾನ್ ಮಸೀದಿಯ ಸ್ಥಾಪಕಾಧ್ಯಕ್ಷರಾಗಿದ್ದ ಅವರು ಸಾಮಾಜಿಕ, ಧಾರ್ಮಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ಸರಳ ವ್ಯಕ್ತಿತ್ವದವರಾಗಿದ್ದರು. ಎ ಕೆ ಗ್ರೂಪ್ ಪ್ರಾರಂಭಿಸಿ ಅದನ್ನು  ಪ್ರತಿಷ್ಠಿತ ಬ್ರ್ಯಾಂಡ್ ಆಗಿ ಪರಿವರ್ತಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.ಮೃತರು ಪತ್ನಿ,ನಾಲ್ಕು ಗಂಡು ಮಕ್ಕಳು ಹಾಗು ಮೂರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!