ಮುಮ್ತಾಝ್ ಅಲಿ ಪ್ರಕರಣ: ರಹಮತ್ ಸೇರಿ ಮೂವರು ಪೊಲೀಸ್ ವಶಕ್ಕೆ!?
ಮಂಗಳೂರು: ಉದ್ಯಮಿ, ಸಮಾಜ ಸೇವಕ ಮುಮ್ತಾಝ್ ಅಲಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಉತ್ತರ ಉಪವಿಭಾಗದ ಪೊಲೀಸ್ ಉಪ ಆಯುಕ್ತ ಮನೋಜ್ ಕುಮಾರ್ ನೇತೃತ್ವದ ಪೊಲೀಸರ ತಂಡ ಪ್ರಕರಣದ ಎ1 ಆರೋಪಿ ರಹಮತ್ ಸೇರಿ ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.
ಮುಮ್ತಾಝ್ ಅಲಿ ಸಾವು ಪ್ರಕರಣದಕ್ಕೆ ಸಂಬಂಧಿಸಿ A1 ಆರೋಪಿ ಸುರತ್ಕಲ್ ಕೃಷ್ಣಾಪುರ 7 ನೇ ಬ್ಲಾಕ್ ನಿವಾಸಿ ರೆಹಮತ್ (41) ಆಕೆಯ ಪತಿ A5 ಆರೋಪಿ ಶುಐಬ್ ಹಾಗೂ ಆರೋಪಿ ಸತ್ತಾರ್ ಎಂಬವರ ಕಾರು ಚಾಲಕ ಎ 6 ಆರೋಪಿ ಸಿರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಆದರೆ ಪೊಲೀಸ್ ಮೂಲದಿಂದ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.