ಜಮ್ಮು ಕಾಶ್ಮೀರ: ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪುತ್ರಿಗೆ ಸೋಲು
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಪುತ್ರಿ ಇಲ್ತಿಜಾ ಮುಫ್ತಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕಾಶ್ಮೀರದ ಬಿಜ್ಬೆಹರಾ ಕ್ಷೇತ್ರದಿಂದ ಅವರು ಸ್ಪರ್ಧಿಸಿದ್ದರು. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಟ್ವೀಟ್ ಮಾಡಿದ ಅವರು, “ಜನರ ತೀರ್ಪನ್ನು ನಾನು ಒಪ್ಪಿಕೊಳ್ಳುತ್ತೇನೆ. ಬಿಜ್ಬೆಹರಾದಲ್ಲಿ ನಾನು ಎಲ್ಲರಿಂದ ಪಡೆದ ಪ್ರೀತಿ ಮತ್ತು ಒಲವು ಯಾವಾಗಲೂ ನನ್ನೊಂದಿಗೆ ಇರುತ್ತದೆ. ಈ ಅಭಿಯಾನದುದ್ದಕ್ಕೂ ಶ್ರಮಿಸಿದ ನನ್ನ ಪಿಡಿಪಿ ಕಾರ್ಯಕರ್ತರಿಗೆ ಕೃತಜ್ಞತೆಗಳು” ಎಂದು ಬರೆದಿದ್ದಾರೆ.