ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು
ಉಡುಪಿ: ಮಾಜಿ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು ಅವರು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ
ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು ವಿಪರೀತ ಜ್ವರ, ಗಂಟಲಿನ ಸೋಂಕು -ಉಸಿರಾಟ ಸಮಸ್ಯೆ ಎದುರಿಸುತ್ತಿದ್ದು ಅ.8ರಂದು ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದು ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.