ಆರೋಪಿ ಅಬ್ದುಲ್ ಸತ್ತಾರ್ ಕಾಂಗ್ರೆಸ್ ನಿಂದ ಉಚ್ಛಾಟನೆ
ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಅಬ್ದುಲ್ ಸತ್ತಾರ್ ನನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಸತ್ತಾರ್ ಅವರು ಸಮಾಜ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿ ಪಕ್ಷಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದು ಅದನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ದಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಆದೇಶಿಸಿದ್ದಾರೆ.