ಬೆಂಗಳೂರು: ಚಾಕು ತೋರಿಸಿ ಬೆದರಿಸಿ ಅತ್ಯಾಚಾರಕ್ಕೆ ಯತ್ನ
ಬೆಂಗಳೂರು: ಅಶೋಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಸೆ.10ರ ರಾತ್ರಿ ನಡೆದಿದ್ದು, ಸಾಮಾಜಿಕ ಹೋರಾಟಗಾರರ ಸಹಾಯದಿಂದ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ವ್ಯಕ್ತಿಯೋರ್ವ ಚಾಕು ತೋರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.
ಅಶೋಕನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಾಥಮಿಕ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮಹಿಳೆಯಿಂದ ಘಟನೆಯ ಮಾಹಿತಿ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.