‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆಯನ್ನು ತಿರಸ್ಕರಿಸಿದ ಕೇರಳ ವಿಧಾನಸಭೆ
‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆಯನ್ನು ಕೇರಳ ವಿಧಾನಸಭೆ ತಿರಸ್ಕರಿಸಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ. ಸಂವಿಧಾನ ವಿರೋಧಿ ಎಂದು ಟೀಕಿಸಿದ ಅದನ್ನು ಜಾರಿಗೊಳಿಸದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಎಂ.ಬಿ.ರಾಜೇಶ್ ಮಂಡಿಸಿದ ನಿರ್ಣಯದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಲ್ಲಿಸಿದ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ. ಇದು “ಪ್ರಜಾಪ್ರಭುತ್ವ ವಿರೋಧಿ ಮನಸ್ಥಿತಿ”ಯನ್ನು ಪ್ರತಿಬಿಂಬಿಸುತ್ತದೆ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿದೆ ಮತ್ತು ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ಹೇಳಿದೆ.
“ಈ ಪ್ರಸ್ತಾವನೆಯನ್ನು ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ರಾಜಕೀಯ ವೈವಿಧ್ಯತೆಯನ್ನು ನಾಶಮಾಡುವ ಕೆಟ್ಟ ತಂತ್ರವೆಂದು ಪರಿಗಣಿಸಲಾಗಿದೆ” ಎಂದು ನಿರ್ಣಯ ಹೇಳಿದೆ.