ಅ.15ರಂದು ಹರ್ಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸಾಧ್ಯತೆ
ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮೂರನೇ ಬಾರಿಗೆ ಗೆಲುವಿನತ್ತ ಮುನ್ನಡೆಸಿರುವ ಬಿಜೆಪಿ ನಾಯಕ ನಯಾಬ್ ಸಿಂಗ್ ಸೈನಿ ಅವರು ಅಕ್ಟೋಬರ್ 15 ರಂದು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದ ವ್ಯವಸ್ಥೆಗಳ ಮೇಲ್ವಿಚಾರಣೆಗಾಗಿ ರಾಜ್ಯ ಮುಖ್ಯ ಕಾರ್ಯದರ್ಶಿ 10 ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಇತರ ಪ್ರಮುಖ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.