ಗುಂಡಿನ ದಾಳಿ: ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ
ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಬಣದ ಎನ್ಸಿಪಿ ಹಿರಿಯ ನಾಯಕ, ಮಾಜಿ ಸಚಿವ ಬಾಬಾ ಸಿದ್ದಿಕಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮುಂಬೈನ ಬಾಂದ್ರಾ ಪಶ್ಚಿಮ ಭಾಗದಲ್ಲಿ ನಡೆದಿದೆ. ಎದೆ, ಹೊಟ್ಟೆ ಭಾಗಕ್ಕೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಇದರಿಂದ ಗಂಭೀರ ಗಾಯಗೊಂಡಿದ್ದ ಸಿದ್ದಿಕಿರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ಕೊನೆಯುರಿಸೆಳೆದಿದ್ದಾರೆ.

ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ ಮಾಡಿ ಹತ್ಯೆಗೈಯಲಾಗಿದೆ. ಬಾಬಾ ಸಿದ್ದಿಕಿ ಕಚೇರಿ ಸಮೀಪ ಕೃತ್ಯವೆಸಗಲಾಗಿದೆ. ಬಾಬಾ ಸಿದ್ದಿಕಿ ಮೇಲೆ ಎರಡು ಮೂರು ಸುತ್ತು ಗುಂಡು ಹಾರಿಸಲಾಗಿದೆ. ಅದರಲ್ಲಿ ಒಂದು ಗುಂಡು ಅವರ ಎದೆಗೆ ತಗುಲಿತು. ಸದ್ಯ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಬಾಬಾ ಸಿದ್ದಿಕಿ ನಿಧನದ ಸುದ್ದಿ ತಿಳಿದ ತಕ್ಷಣ ಸಾಕಷ್ಟು ಕಾರ್ಯಕರ್ತರು ಆಸ್ಪತ್ರೆ ಎದುರು ಜಮಾಯಿಸಿದ್ದಾರೆ. ಬಾಬಾ ಸಿದ್ದಿಕಿ ಅವರ ಹೆಸರು ಬಾಲಿವುಡ್‌ನಲ್ಲೂ ಪ್ರಸಿದ್ಧವಾಗಿದೆ. ಪ್ರತಿ ವರ್ಷ ಇವರು ಆಯೋಜಿಸುವ ಇಫ್ತಾರ್ ಕೂಟ ಹೆಚ್ಚು ಫೆಮೇಸ್. ಬಾಲಿವುಡ್ ಸೆಲೆಬ್ರಿಟಿಗಳು ಮಾತ್ರವಲ್ಲದೆ ಅನೇಕ ಕಿರುತೆರೆ ತಾರೆಯರು ಕೂಡ ಈ ಪಾರ್ಟಿಯಲ್ಲಿ ಭಾಗವಹಿಸುತ್ತಾರೆ. ನಟ ಸಲ್ಮಾನ್ ಖಾನ್ ಬಾಬಾ ಸಿದ್ದಿಕಿ ಜೊತೆ ನಿಕಟ ಸಂಬಂಧ ಹೊಂದಿದ್ದರು.