ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಿಂತಿಲ್ಲ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿಕೆ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ.

ನಮ್ಮ ಸರ್ಕಾರ ಬಂದ ಮೇಲೆ ಅಭಿವೃದ್ಧಿಗೆ ಅನುದಾನ ಕೊಟ್ಟಿದ್ದೇವೆ. ರೈತರಿಗೆ ವಿಮೆ ಕೂಡಾ ಜಾಸ್ತಿ ಕ್ಲೈಮ್ ಆಗಿದೆ. ಯಾವ ಹಿನ್ನಲೆಯಲ್ಲಿ ಅವರು ಹೇಳಿದ್ದಾರೆ ಗೊತ್ತಿಲ್ಲ. ರಾಜ್ಯದಲ್ಲಿ ಯಾವ ಕೆಲಸವೂ ನಿಂತಿಲ್ಲ. ಎಂದರು.