ಉಪ್ಪಿನಂಗಡಿ: ಭಾರೀ ಗಾತ್ರದ ಕಾಡುಕೋಣ ಬೇಟೆ
ಉಪ್ಪಿನಂಗಡಿ: ಬೇಟೆಗಾರರ ತಂಡ ಭಾರೀ ಗಾತ್ರದ ಕಾಡುಕೋಣವನ್ನು ಕೊಂದು ಒಣ ಮಾಂಸವನ್ನಾಗಿ ಪರಿವರ್ತಿಸಿದ ಘಟನೆಯನ್ನು ಉಪ್ಪಿನಂಗಡಿ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿದೆ.
ನಿಡ್ಲೆ ಗ್ರಾಮದ ಬೂಡುಜಾಲಿನಲ್ಲಿ ಮೀಸಲು ಅರಣ್ಯದ ಅಂಚಿನಲ್ಲಿರುವ ತೋಟದಲ್ಲಿ ಕಾಡುಕೋಣವೊಂದನ್ನು ಗುಂಡಿಕ್ಕಿ ಕೊಂದು ಕಾಡಿನಲ್ಲೇ ಕತ್ತರಿಸಿ ಪಿಕಪ್ ವಾಹನದ ಮೂಲಕ ಸಾಗಿಸಿರುವ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳೆಲ್ಲರೂ ಪರಾರಿಯಾಗಿದ್ದು, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.