ಕರಾವಳಿಕ್ರೈಂ

ಸ್ವಿಫ್ಟ್ ಕಾರಿನಲ್ಲಿ ಅಕ್ರಮ ದನ ಸಾಗಾಟ ಯತ್ನ, ಪೊಲೀಸ್ ದಾಳಿ



ಬೆಳ್ಳಾರೆ: ಅಕ್ರಮ ದನ ಸಾಗಾಟ ಮಾಡಲು ತಯಾರಿ ನಡೆಸಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಅ.14ರಂದು ರಾತ್ರಿ, ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಮುಚ್ಚಿಲ ಎಂಬಲ್ಲಿ ನಡೆದಿದೆ.

ಸ್ವಿಪ್ಟ್ ಕಾರೊಂದರಲ್ಲಿ ಅಕ್ರಮವಾಗಿ ದನಗಳನ್ನು ತುಂಬಿಸಿ ಸಾಗಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಈರಯ್ಯ ಡಿ ಎನ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ತೆರಳಿದಾಗ ರಸ್ತೆ ಬದಿಯಲ್ಲಿ ಬಿಳಿ ಬಣ್ಣದ ಕಾರೊಂದು ನಿಂತಿದ್ದು, ಸದ್ರಿ ಕಾರನ್ನು ಪರಿಶೀಲಿಸಿದಾಗ ಕಾರಿನೊಳಗೆ ಹಿಂಸಾತ್ಮಕವಾಗಿ ಮೂರು ದನಗಳನ್ನು ತುಂಬಿಸಿರುವುದು ಕಂಡು ಬಂದಿದೆ. ಕಾರು ನಿಲ್ಲಿಸಿದ ಸ್ಥಳದಿಂದ ಸ್ವಲ್ಪ ದೂರದಲ್ಲಿರುವ ತೆರೆದ ದನದ ಕೊಟ್ಟಿಗೆಯಲ್ಲಿಯೂ 2 ಜಾನುವಾರುಗಳು ಕಂಡುಬಂದಿದ್ದು, ಸದ್ರಿ ಜಾನುವಾರುಗಳನ್ನು ಮೂರು ಜನರು ಬಿಚ್ಚಲು ಪ್ರಯತ್ನಿಸುತ್ತಿದ್ದವರು ಪೊಲೀಸರನ್ನು ಕಂಡು ಓಡಿಹೋಗಿದ್ದಾರೆ.

ಓಡಿ ಪರಾರಿಯಾದ ವ್ಯಕ್ತಿಗಳು ಕೊಟ್ಟಿಗೆಯಲ್ಲಿದ್ದ ದನಗಳನ್ನು ಹಾಗೂ ಕಾರಿನಲ್ಲಿದ್ದ ಜಾನುವಾರುಗಳನ್ನು ಮಾಂಸ ಮಾಡುವ ಉದ್ದೇಶಕ್ಕಾಗಿ ಅಕ್ರಮವಾಗಿ ಸಾಗಾಟ ಮಾಡಲು ಪ್ರಯತ್ನಿಸುತ್ತಿರುವುದು ಕಂಡು ಬಂದ ಮೇರೆಗೆ, ಸದ್ರಿ ದನಗಳನ್ನು, ಹಗ್ಗವನ್ನು ಮತ್ತು ದನಗಳನ್ನು ತುಂಬಿಸಿರುವ ಕಾರನ್ನು ಮುಂದಿನ ಕ್ರಮಕ್ಕಾಗಿ ಸ್ವಾಧೀನಪಡಿಸಿಕೊಂಡು, ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!