ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
ಸಚಿವ ದಿನೇಶ್ ಗುಂಡೂರಾವ್ ಪತ್ನಿ ತಬಸ್ಸುಮ್ ದಿನೇಶ್ ಗುಂಡೂರಾವ್ ಅವರು ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ತಬಸ್ಸುಮ್ ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಬೆಂಗಳೂರಿನ 42ನೇ ACMM ಕೋರ್ಟ್ ಜಡ್ಜ್ ಕೆ.ಎನ್.ಶಿವಕುಮಾರ್ ಅವರು ಇಂದು (ಅಕ್ಟೋಬರ್ 16) ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.