ಕರಾವಳಿ

ಹಿಂಜಾವೇ ಪ್ರತಿಭಟನೆ ಬೆನ್ನಲ್ಲೇ ಸಂಜೀವ ಪೂಜಾರಿ ವಶಕ್ಕೆ ಪಡೆದ ಪೊಲೀಸರು

ಪುತ್ತೂರು: ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಕೀಳುಮಟ್ಟದ ಪದ ಬಳಸಿ ಅವಮಾನ ಮಾಡಿರುವ ಆರೋಪದ ಮೇರೆಗೆ ಅರಣ್ಯ ಸಂರಕ್ಷಣಾ ಅಧಿಕಾರಿ ಸಂಜೀವ ಪೂಜಾರಿಯವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಅರಣ್ಯ ಸಂರಕ್ಷಣಾ ಅಧಿಕಾರಿ ಸಂಜೀವ ಪೂಜಾರಿ ಬಂಧನಕ್ಕೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಭಜನೆ ಮಾಡುವ ಮೂಲಕ ಇಂದು ಪುತ್ತೂರು ಡಿವೈಎಸ್ಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಬಂಧನಕ್ಕೆ ಆಗ್ರಹಿಸಲಾಗಿತ್ತು. ಇದೀಗ ಬೆಳ್ಳಾರೆ ಪೊಲೀಸರು ಆರೋಪಿ ಸಂಜೀವ ಪೂಜಾರಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!