ಶಿರೂರು ಗುಡ್ಡ ಕುಸಿತ ಪ್ರಕರಣ: ಹೋಟೆಲ್ ಮಾಲೀಕ ಜಗನ್ನಾಥ್ ಪುತ್ರಿಗೆ ಉದ್ಯೋಗ ಕಲ್ಪಿಸಿದ ಕುಮಾರಸ್ವಾಮಿ
ಉತ್ತರ ಕನ್ನಡ: ಅಂಕೋಲ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕ ಜಗನ್ನಾಥ್ ಅವರ ಪುತ್ರಿ ಎನ್. ಕೃತಿ ಅವರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಿಹೆಚ್ಇಎಲ್ ನಲ್ಲಿ ಉದ್ಯೋಗ ಕಲ್ಪಿಸಿದ್ದಾರೆ.

ಕೈಗಾ ಅಣು ವಿದ್ಯುತ್ ಸ್ಥಾವರದ ಬಿಹೆಚ್ಇಎಲ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ಈ ಹಿಂದೆ ಕುಮಾರಸ್ವಾಮಿ ಅವರು ಎನ್. ಕೃತಿ ಅವರಿಗೆ ದೂರವಾಣಿ ಕರೆ ಮಾಡಿ ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ಹೆಚ್.ಡಿ ಕುಮಾರಸ್ವಾಮಿ ಅವರು ಕೃತಿಗೆ ಕೆಲಸ ಕೊಡಿಸಿದ್ದಾರೆ.
ಮಂಡ್ಯದ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉದ್ಯೋಗ ಮೇಳವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಅವರು ಕೃತಿ ಅವರಿಗೆ ನೇಮಕಾತಿ ಪತ್ರ ನೀಡಿದರು.