ಮಂಗಳೂರು: ರಸ್ತೆ ಅಪಘಾತ, ಯುವತಿ ಸ್ಥಳದಲ್ಲೇ ಮೃತ್ಯು
ಮಂಗಳೂರು: ಸ್ಕೂಟರ್‌ಗೆ ಕಂಟೇನರ್ ಡಿಕ್ಕಿಯಾದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಂತೂರು ವೃತ್ತದ ಬಳಿ ಅ.20ರಂದು ಸಂಜೆ ನಡೆದಿದೆ.
ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ (27ವ) ಮೃತ ದುರ್ದೈವಿ. ಮೃತ ಕ್ರಿಸ್ತಿಯವರು ನಂತೂರು ವೃತ್ತದಿಂದ ಪಂಪ್ವೆಲ್ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಮೀನು ಸಾಗಾಟದ ಲಾರಿ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.